ಎಐಎಡಿಎಂಕೆಯಿಂದ 6 ದಿನಕರನ್ ಬೆಂಬಲಿಗರಿಗೆ ಗೇಟ್ ಪಾಸ್

By Editor
08:41:55 AM / Wed, Feb 21st, 2018

ಚೆನ್ನೈ, ಡಿಸೆಂಬರ್ 25: ಆರ್.ಕೆ ನಗರ ಉಪಚುನಾವಣೆಯಲ್ಲಿ ಶಶಿಕಲಾ ನಟರಾಜನ್ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಟಿಟಿವಿ ದಿನಕರನ್ ಜಯ ಸಾಧಿಸುತ್ತಿದ್ದಂತೆ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಕ್ರುದ್ಧರಾಗಿದ್ದಾರೆ.

ದಿನಕರನ್ ಬೆಂಬಲಿತ 6 ಆರು ಎಐಎಡಿಎಂಕೆಯ ಪ್ರತಿನಿಧಿಗಳನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರ್.ಕೆ ನಗರ ಉಪಚುನಾವಣೆ, ಟಿಟಿವಿ ದಿನಕರನ್ ಗೆ ಭರ್ಜರಿ ಜಯ ಇಂದು ಚೆನ್ನೈನಲ್ಲಿ ನಡೆದ ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಒ ಪನ್ನೀರ್ ಸೆಲ್ವಂ ಮತ್ತು ಎಡಪ್ಪಾಡಿ ಪಳನಿಸ್ವಾಮಿ ಪಾಲ್ಗೊಂಡಿದ್ದರು.

ಭಾನುವಾರ ಹೊರಬಿದ್ದ ಆರ್.ಕೆ ನಗರ ಉಪಚುನಾವಣೆಯಲ್ಲಿ ಟಿಟಿವಿ ದಿನಕರನ್ 40,707 ಸಾವಿರ ಮತಗಳಿಂದ ಎಐಎಡಿಎಂಕೆ ಅಭ್ಯರ್ಥಿ ಇ ಮಧುಸೂದನ್ ರನ್ನು ಸೋಲಿಸಿದ್ದರು. ಈ ಗೆಲುವಿಗೆ ಸಹಕರಿಸಿದ್ದಾರೆ ಎಂಬ ಆರೋಪದ ಮೇಲೆ ಆರು ಪದಾಧಿಕಾರಿಗಳನ್ನು ಪಕ್ಷದಿಂದ ಕಿತ್ತು ಹಾಕಲಾಗಿದೆ.

Leave A Comment